ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ 

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ ನಡೆಸಿದ್ದಾರೆ. ಮಲ್ಲೇಶ್ವರ ನಗರದಲ್ಲಿರುವ ಸಚಿವರ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾರ್ಯಕರ್ತರನ್ನು ಹೊಳೆ ಬಸ್‌ಸ್ಟಾಪ್ ಬಳಿಯೇ ಪೊಲೀಸರು ತಡೆದಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಸರಕಾರ, ಸಚಿವ ಈಶ್ವರಪ್ಪ ವಿರುದ್ಧ ಘೋಷಣೆಗಳನ್ನು ಹಾಕಿ, ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಿ ಹೊರಟಿದ್ದರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟಗಳು ನಡೆದಿವೆ. ಕೊಲೆಗಡುಕ ಈಶ್ವರಪ್ಪನ್ನು ಬಂಧಿಸುವುದು ಬಿಟ್ಟು ನಮ್ಮನ್ನು ಬಂಧಿಸಿದ್ದಾರೆ. ಸರ್ಕಾರಕ್ಕೆ ನಾಚಿಕೆ, ಮಾನ ಮರ್ಯಾದೆ ಇದ್ದರೆ ಅವರನ್ನು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.