ಹೈಲೆಟ್ಸ್ :
ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಕಾರ್ಯಕ್ರಮ
ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಸಭೆ
ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ದಿವ್ಯ ಸಾನಿಧ್ಯ
ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ
ಶಿವಮೊಗ್ಗ : ಪ್ರತಿ ವರ್ಷದಂತೆ ಈ ವರ್ಷವು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಕಾರ್ಯಕ್ರಮ ನಡೆಯಿತು. ವೀರಶ್ವವ ಕಲ್ಯಾಣ ಮಂಟಪದ ಹಿಂಭಾಗದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮದ ಹಿನ್ನೆಲೆ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಸಭೆ ನಡೆಯಿತು. ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ವಹಿಸಿಕೊಂಡಿದ್ರು. ವೀರಶೈವ ಲಿಂಗಾಯತ ಸಮಾಜದವರು ನೂರಾರು ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.
ಶ್ರೀ ವೀರಭದ್ರೇಶ್ವರ ಜಯಂತೋತ್ಸವದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ವೀರಶೈವ ಕಲ್ಯಾಣ ಮಂದಿರದಲ್ಲಿ ಶಿಬಿರ ಆಯೋಜನೆ ಮಾಡಲಾಗಿತ್ತು. ಸರ್ಜಿ ಪೌಂಡೇಶನ್ ಜೊತೆಗಿನ ಸಂಯುಕ್ತ ಆಶ್ರಯದಲ್ಲಿ ನಡೆದ ಆರೋಗ್ಯ ಶಿಬಿರದಲ್ಲಿ ಆರೋಗ್ಯ ತಪಾಸಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗದ್ದ ಸಾಕಷ್ಟು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆಗೆ ಒಳಗಾದರು.