ಆಗಸ್ಟ್ ೩ರಂದು ದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಕುರಿತು ಮಾಧ್ಯಮಗೋಷ್ಠಿಯಲ್ಲಿ ಹೆಚ್.ಆಂಜನೇಯ ಮಾಹಿತಿ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಆಗಸ್ಟ್ ೩ ರಂದು ದಾವಣಗೆರೆಯಲ್ಲಿ ಸಿದ್ಧರಾಮಯ್ಯ 75 ಅಮೃತ ಮಹೋತ್ಸವ ಹೆಸರಲ್ಲಿ ಆಯೋಜಿಸಲಾಗಿದೆ.

ಈ ಬೃಹತ್ ಸಮಾರಂಭಕ್ಕೆ ಶಿವಮೊಗ್ಗ ಜಿಲ್ಲೆಯಿಂದಲೂ ಸಾವಿರಾರು ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಅಮೃತ ಮಹೋತ್ಸವ ಸಮಿತಿ ಶಿವಮೊಗ್ಗ ಜಿಲ್ಲಾ ವೀಕ್ಷಕ ಹಾಗೂ ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಸಮಾರಂಭಕ್ಕೆ ರಾಹುಲ್‌ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ಇದೊಂದು ಅಪೂರ್ವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಿಂದ ರಾಜಕೀಯ ಪಕ್ಷಗಳು ಬೆದರಿ ಹೋಗಿವೆ. ಶಕ್ತಿ ಪ್ರದರ್ಶನವಾಗುತ್ತದೆ. ಭಾರೀ ಜನಸೇರುತ್ತಾರೆ. ಏನು ಮಾಡುವುದು ಎಂಬ ಭಯದಲ್ಲಿ ಬಿಜೆಪಿ ಇದೆ. ಅದಕ್ಕಾಗಿಯೇ ಇಂತಹ ಕಾರ್ಯಕ್ರಮವನ್ನು ಬಿಜೆಪಿಯವರು ವಿರೋಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ರು.