ಸೊರಬ : ಬಗರ್‌ಹುಕುಂ ಹಕ್ಕುಪತ್ರಕ್ಕೆ ಆಗ್ರಹಿಸಿ ಸೊರಬದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಮಾಜಿ ಶಾಸಕ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗಿಯಾಗಿದ್ದರು.
ಕೇಂದ್ರ ಸರ್ಕಾರವು ರೈತ ವಿರೋಧಿಯಾಗಿದೆ. ಹೀಗಾಗಿಯೇ ಬಗರ್‌ಹುಕುಂ ಅರ್ಜಿಗಳನ್ನು ವಜಾ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪಾಲ್ಗೊಂಡು ಕೇಂದ್ರ ಸರ್ಕಾರದ ರೈತ ವಿರೋಧಿ ಆಡಳಿತವನ್ನು ಖಂಡಿಸಿದ್ರು.