ಮಳೆ ಹಾನಿ ಪರಿಹಾರಕ್ಕೆ ಸದನದಲ್ಲಿ ಶಾಸಕ ಮಧುಬಂಗಾರಪ್ಪ ಮನವಿ

ಬೆಂಗಳೂರು : ಸೊರಬದಲ್ಲಿ ಕೆಲದಿನಗಳ ಹಿಂದೆ ಸುರಿಧ ಭಾರಿ ಮಳೆಯಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಕಲ್ಪಿಸಬೇಕು, ಈ ವೇಳೆ ಮೃತ ಪಟ್ಟಿರುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು ಎಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಸದನದಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಅಧಿವೇಶನದಲ್ಲಿ ಮಾತನಾಡಿದ ಅವರು, ವಾಯುಭಾರ ಕುಸಿತದಿಂದ ಸೊರಬದಲ್ಲಿ ಸುರಿದ ಮಳೆಯಿಂದಾಗಿ ಕಸಬ, ಆನವಟ್ಟಿ ಹಾಗೂ ಚಂದ್ರಗುತ್ತಿ ಹೋಬಳಿಗಳಲ್ಲಿ ಸಾಕಷ್ಟು ಹಾನಿಯಾಗಿದೆ. ರಸ್ತೆಗಳು ಬ್ಲಾಕ್ ಆಗಿವೆ. ಆದ್ದರಿಂದ ಅರಣ್ಯ ಇಲಾಖೆ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿಕೊಂಡು ರಸ್ತೆ ಪಕ್ಕದಲ್ಲಿರುವ ಹಳೆ ಮರಗಳನ್ನು ತೆರವುಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್.ಅಶೋಕ್, ಡಿಸಾಸ್ಟರ್ ಮ್ಯಾನೆಜ್‌ಮೆಂಟ್ ಕಾಯ್ದೆಯ ಅಡಿಯಲ್ಲಿ ಪರಿಹಾರ ನೀಡಲಾಗುವುದು. ಹಳೆ ಮರಗಳ ವಿಚಾರದಲ್ಲಿ ಪಿಡಬ್ಲ್ಯೂಡಿ ಇಲಾಖೆ ಸಚಿವರೊಂದಿಗೆ ಮಾತನಾಡಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.