ಎನ್‌ಇಎಸ್ ವಿಶೇಷ ಅಂಜೆ ಲಕೋಟೆ ಬಿಡುಗಡೆ 

ಶಿವಮೊಗ್ಗ : ಸ್ವಾತಂತ್ರ್ಯ ಪೂರ್ವದಲ್ಲಿಯೇ ಶೈಕ್ಷಣಿಕ ಕ್ಷೇತ್ರಕ್ಕಾಗಿ ಆರಂಭವಾಗಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿ ೭೫ ನೇ ವರ್ಷದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಹೀಗಾಗಿ ಭಾರತೀಯ ಅಂಚೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎನ್.ಇ.ಎಸ್ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಎನ್‌ಇಎಸ್ ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಪಿ.ನಾರಾಯಣ ತಿಳಿಸಿದರು. ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ೧೦ರಂದು ಸಂಜೆ ೪ ಗಂಟೆಗೆ ಎನ್‌ಇಎಸ್ ಕಾರ್ಯಾಲಯದ ಆವರಣದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ದಕ್ಷಿಣ ವಲಯ ಪೋಸ್ಟ್ ಮಾಸ್ಟರ್ ಜನರಲ್ ಡಿ.ಎಸ್.ವಿ.ಆರ್ ಮೂರ್ತಿ ಅಂಚೆ ಲಕೋಟೆ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು