ಜಿಲ್ಲೆಯಲ್ಲಿ ಸುಗಮವಾಗಿ ಆರಂಭವಾದ ಪರೀಕ್ಷೆ 

ಶಿವಮೊಗ್ಗ : ಜಿಲ್ಲೆಯಲ್ಲಿ 24 ಸಾವಿರದ 387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ರಮೇಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಕುಡಿಯು ನೀರಿನ ವ್ಯವಸ್ಥೆ, ಸ್ಯಾನಿಟೇಜರ್ ವ್ಯವಸ್ಥೆ ಮಾಡಲಾಗಿದೆ. ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ 25 ಸಾವಿರ ಮಾಸ್ಕ್ ನೀಡಿದ್ದಾರೆ. ಪರೀಕ್ಷ ವೀಕ್ಷಕರಾಗಿ ಹಾಸನದ ಉಪನಿರ್ದೇಶಕರಾದ ಪುಟ್ಟರಾಜು ಬಂದಿದ್ದಾರೆ. ಕೆಲವು ಕಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಕೊಂಡು ಬಂದಿದ್ದರು ಕೂಡ ಅದನ್ನು ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದಾರೆ. ಎಲ್ಲಾ ಕಡೆಯು ಪರೀಕ್ಷೆ ಸುಗಮವಾಗಿ ನಡೆಯುತ್ತಿದೆ ಡಿಡಿಪಿಐ ಮಾಹಿತಿ ನೀಡಿದ್ದಾರೆ.