ಕುಂಸಿ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಶಾಸಕ ಮಧು ಬಂಗಾರಪ್ಪ ಚಾಲನೆ ನೀಡಿದರು. ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಹಾಗೂ ಅಭಿಮಾನಿಗಳ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿಯವರು ಹಿಂದುತ್ವ, ಅವನು ಸತ್ತ, ಇವನು ಸತ್ತ, ಆ ಧರ್ಮ ಈ ಧರ್ಮ ಅಂತ ದೇಶ ಹಾಳು ಮಾಡಲಿಕ್ಕೆ ಹೋಗ್ತಾರೆ.
ಆದ್ರೆ ಕಾಂಗ್ರೆಸ್ ಪಕ್ಷ ಸಾಮಾನ್ಯ ಜನರ ಹೋರಾಟಕ್ಕೆ ಸೇರಿಕೊಂಡು, ನಾವು ಪಕ್ಷ ಕಟ್ಟಬೇಕು ಎಂದರು. ಈ ವೇಳೆ ವೇದಿಕೆ ಮೇಲೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕೆಪಿಸಿಸಿ ವೀಕ್ಷಕ ಹುಸೇನ್, ಕಲಗೋಡು ರತ್ನಾಕರ್, ಡಾ. ಶ್ರೀನಿವಾಸ್ ಕರಿಯಣ್ಣ, ಪಲ್ಲವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.