ಶಿವಮೊಗ್ಗ : ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ವಿವಿಧ ಸಮಿತಿ ಹಾಗೂ ೨೯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ನಾವು ಕೆಲಸ ಮಾಡುತ್ತಿದ್ದೆವೆ. ಕಡಿಮೆ ಸಿಬ್ಬಂದಿ ಇರುವುದರಿಂದ ಅಧಿಕಾರಿಗಳು ಹಾಗೂ ನೌಕರರು ಅಧಿಕ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಕೂಡ ನಮ್ಮ ಕೆಲ ಬೇಡಿಕೆಗಳನ್ನು ಈಡೇರಿಸಿಲ್ಲ. ಇನ್ನು ೧೫ ದಿನಗಳ ಒಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು.
ಇಲ್ಲವಾದಲ್ಲಿ ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.