ಬೆಂಗಳೂರು : ಕೊರೊನಾ ಓಮಿಕ್ರಾನ್ ಭೀತಿ ಹೆಚ್ಚುತ್ತಲೇ ಇದೆ. ಆತಂಕಪಡುವ ಅಗತ್ಯ ಇಲ್ಲ ಎಂದರೂ ವೈರಾಣುವಿನ ಭಯ ಹೆಚ್ಚುತ್ತಿದೆ. ಈ ನಡುವೆ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಸಂಭ್ರಮ ಎದುರಾಗಿದೆ. ಹೀಗಾಗಿ ಸರ್ಕಾರ ಈ ಕುರಿತು ಯಾವ ಕ್ರಮ ತೆಗೆದುಕೊಂಡಿದೆ ಎನ್ನುವ ಪ್ರಶ್ನೆ ಎದುರಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾತನಾಡಿದ್ದು, ಎಲ್ಲವೂ ನಮ್ಮ ಗಮನದಲ್ಲಿದೆ. ಸದ್ಯಕ್ಕೆ ಓಮಿಕ್ರಾನ್ ತಡೆಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಆ ಬಳಿಕ ಹೊಸ ವರ್ಷಾಚರಣೆ ಸಂಬಂಧ ಪ್ರತ್ಯೇಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬರದಿದ್ದಲ್ಲಿ, ಹೊಸ ವರ್ಷಾಚರಣೆಗೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಅದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿ, ಮುಕ್ತ ಆಚರಣೆಗೆ ನಿಭಂದ ಹೇರುವ ಸಾಧ್ಯತೆ ಇದೆ.