ಶಿವಮೊಗ್ಗ : ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಪುನಃ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ಕೆಲ ದಿನಗಳಿಂದ ತಣ್ಣಗಾಗಿದ್ದ ಹಿಜಾಬ್ ವಿವಾದ ಮತ್ತೆ ಮನ್ನೆಲೆಗೆ ಬಂದಿದೆ. ಹಿಜಾಬ್ ನಮ್ಮ ಗುರುತು, ನಾವು ಸಂವಿಧಾನಕ್ಕೆ ಬೆಲೆ ಕೊಡುತ್ತೇವೆ. ಆದರೆ ನಮಗೆ ಶಾಲಾ-ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರಲು ಅನುಮತಿ ನೀಡಬೇಕೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಸಮವಸ್ತ್ರ ಕಡ್ಡಾಯವಿರುವ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಯಾವುದೇ ಧಾರ್ಮಿಕ ಸಂಕೇತವನ್ನು ಪ್ರದರ್ಶಿಸದಂತೆ ಹೈಕೋರ್ಟ್ ಮದ್ಯಾಂತರ ಆದೇಶ ನೀಡಿದೆ. ಅಲ್ಲದೆ ಈ ಕುರಿತಾದ ವಿಚಾರಣೆ ಪೂರ್ಣಗೊಳಿಸಿ ತೀರ್ಪ ಕಾಯ್ದಿರಿಸಿದೆ. ಈ ನಡುವೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬರಲು ಅವಕಾಶ ನೀಡುವಂತೆ ಪ್ರತಿಭಟನೆ ನಡೆಸಿದ್ದಾರೆ.