ಹರ್ಷ ಕುಟುಂಬ ಸದಸ್ಯರಿಗೆ ಸಂತರ ಸಾಂತ್ವನ  

ಶಿವಮೊಗ್ಗ : ಹತ್ಯೆಯಾಗಿರುವ ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ಮಠದ ಮಠಾಧೀಶರು ಭೇಟಿ ನೀಡಿ ಸಾಂತ್ವನ ಹೇಳಿದರು.

ಭೇಟಿಯಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ,  ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಡಾ.ಶಾಂತವೀರ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಡಾ.ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಡಾ ಬಸವ ಮರುಳಸಿದ್ಧ ಸ್ವಾಮೀಜಿ, ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಮಹಾಲಿಂಗ ಸ್ವಾಮೀಜಿ ಭಾಗವಹಿಸಿದ್ದರು. ಸಂಘರ್ಷದಿಂದ ಹೊರ ಬಂದು ಎಲ್ಲರೂ ಸಾಮರಸ್ಯ ಕಾಪಾಡಬೇಕು ಎಂದು ಸ್ವಾಮೀಜಿಗಳು ಕರೆ ನೀಡಿದರು.