ಮಂಡಗದ್ದೆ ಬಳಿ ಭೀಕರ ರಸ್ತೆ ಅಪಘಾತ 

ತೀರ್ಥಹಳ್ಳಿ : ಶಿವಮೊಗ್ಗ - ತೀರ್ಥಹಳ್ಳಿ ರಸ್ತೆಯ ಮಂಡಗದ್ದೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ೧೬ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಖಾಸಗಿ ಬಸ್-ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಆದರ್ಶ್ ಎಂಬಾತನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆಯಲ್ಲಿ ಆತನನ್ನು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ರಸ್ತೆಯಲ್ಲಿ ಕಡಿದಾದ ತಿರುವುಗಳು ಇದ್ದು, ರಸ್ತೆ ಅಗಲೀಕರಣವನ್ನೂ ಮಾಡಲಾಗಿದೆ. ಆದರೂ ಸಹ ಅತೀ ವೇಗವಾಗಿ ವಾಹನ ಚಾಲನೆ ಮಾಡಿರೋದು ಈ ಅಪಘಾತಕ್ಕೆ ಕಾರಣವಾಗಿದೆ.