ಶಿವಮೊಗ್ಗ : ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸದಂತೆ ದಿನೇ ದಿನೇ ಒಂದೊಂದೆ ಆರೋಪಗಳು ಸರ್ಕಾರ ಹಾಗೂ ಪಠ್ಯ ಪರಿಷ್ಕರಣ ಸಮಿತಿ ಮೇಲೆ ಕೇಳಿ ಬರ್‍ತಾಯಿದೆ. ಈ ಎಲ್ಲಾ ಆರೋಪಗಳಿಗೆ ಉತ್ತರ ಕೊಡುವ ಕೆಲಸವನ್ನು ಕೂಡ ಮಾಡಲಾಗುತ್ತಿದೆ.
ಈ ಹಿನ್ನೆಲೆ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಸತ್ಯ-ಮಿಥ್ಯ ವಿಚಾರ ಸಂಕೀರ್ಣ ಕಾರ್ಯಕ್ರಮ ನಡೆಯಿತು. ಶಿವಮೊಗ್ಗ ರಾಷ್ಟ್ರೋತ್ಥಾನ ಬಳಗದಿಂದ ಆಯೋಜಿಸಲಾಗಿದ್ದ ಈ ವಿಚಾರ ಸಂಕೀರ್ಣದ ಉದ್ಘಾಟನೆಯನ್ನು ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಸ್.ಎ.ಬಾರಿ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಿದ್ದರು. ಶಿವಮೊಗ್ಗ ರಾಷ್ಟ್ರೋತ್ಥಾನ ಬಳಗದ ಅಧ್ಯಕ್ಷ ಡಾ.ಪಿ.ಆರ್.ಸುಧೀಂದ್ರ ವಿಚಾರಣ ಸಂಕೀರ್ಣದ ಅಧ್ಯಕ್ಷತೆ ವಹಿಸಿಕೊಂಡಿದ್ದರು.