ಶಿವಮೊಗ್ಗ : ಇಂಡೊನೇಷ್ಯದ ಸಮರ ಕಲೆಯಾಗಿದ್ದು, ಬಳಿಕ ಕ್ರೀಡೆಯ ರೂಪವನ್ನು ಪಡೆದುಕೊಂಡಿರುವ ಪೆಂಕಾಕ್ ಸಿಲಾತ್ ಕ್ರೀಡಾಕೂಟ ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಪೆಂಕಾಕ್ ಸಿಲಾತ್ ಸಂಸ್ಥೆಯು ಜೂನ್ ೨೫,೨೬ರಂದು ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ೩ನೇ ದಕ್ಷಣ ರಾಜ್ಯಗಳ ಪೆಂಕಾಕ್ ಸಿಲಾತ್ ಕ್ರೀಡಾಕೂಟವನ್ನು ಆಯೋಜಿಸಿದೆ. ಈ ಪಂದ್ಯಾವಳಿಯಲ್ಲಿ ಸುಮಾರು ೫೦೦ ಕ್ರೀಡಾಪಟುಗಳು ನೂರು ತೀರ್ಪುಗಾರರು, ಕ್ರೀಡಾಧಿಕಾರಿಗಳು ಹಾಗೂ ತರಬೇತುದಾರರು ಪಾಲ್ಗೊಳಲಿದ್ದಾರೆ.
ಕ್ರೀಡಾಕೂಟದ ಉದ್ಘಾಟನೆಯನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಪೆಂಕಾಕ್ ಸಿಲಾತ್ ಅಸೋಸಿಯೇಷನ್‌ನ ಅಧ್ಯಕ್ಷ ಜಗನಾಥ ಅಲಂಪಲ್ಲಿ ವಹಿಸಿಕೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಪೆಂಕಾಕ್ ಸಿಲಾತ್ ಸಂಸ್ಥೆಯಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.