ಪರಿಷತ್ ಫೈಟ್ : ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಡಿಸೆಂಬರ್ ೧೦ರಂದು ಮತದಾನ ನಡೆದಿದ್ದು, ನಾಳೆ ಮತ ಎಣಿಕೆ ನಡೆಯಲಿದೆ.

ಶಿವಮೊಗ್ಗದಿಂದ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಪ್ರಸನ್ನಕುಮಾರ್, ಬಿಜೆಪಿಯಿಂದ ಡಿ.ಎಸ್.ಅರುಣ್, ಜೆಡಿಯುನಿಂದ ಶಶಿಕುಮಾರ್ ಗೌಡ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರವಿ ಪಿ.ವೈ. ಕಣದಲ್ಲಿದ್ದಾರೆ. ಇವರೆಲ್ಲರ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ನಾಳೆ ನಿರ್ಧಾರವಾಗಲಿದೆ. ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ ೮ ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಇದೆ.