ಶಿವಮೊಗ್ಗ : ಸುಮಾರು 116.31 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತರುವ ಭದ್ರಾವತಿಯ ಕಡದಕಟ್ಟೆ, ಸವಳಂಗ ರಸ್ತೆ, ಕಾಶಿಪುರ ಗೇಟ್ ರೈಲ್ವೆ ಮೇಲ್ಸೇತುವೆ ಹಾಗೂ ಶಿವಮೊಗ್ಗ ವಿದ್ಯಾನಗರ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು ನಡೆಯುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಧಿಕಾರಿಗಳಿಂದ ಕಾಮಗಾರಿಯ ಕುರಿತು ಮಾಹಿತಿ ಪಡೆದುಕೊಂಡು ಸಲಹೆ, ಸೂಚನೆಗಳನ್ನ ನೀಡಿದರು. ಈ ವೇಳೆ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಈ ಮೂರು ಕಾಮಗಾರಿಗಳ ನಿರ್ಮಾಣವನ್ನು ಎಸ್.ಆರ್.ಸಿ. ಕಂಪನಿಗೆ ಗುತ್ತಿಗೆ ನೀಡಿದೆ. ಈಗಾಗಲೇ ಮೂರು ಕಾಮಗಾರಿಗಳು ಭರದಿಂದ ಸಾಗಿವೆ. ಮು೦ದಿನ 10-12 ತಿಂಗಳುಗಳಲ್ಲಿ ಇವುಗಳನ್ನ ಪೂರ್ಣಗೊಳಿಸಲಾಗುವುದು. ಕಾಶಿಪುರ ಹಾಗೂ ಸವಳ೦ಗ ರಸ್ತೆ ಮೇಲ್ವೇತುವೆಗಳಲ್ಲಿ ನಾಗರೀಕರಿಗೆ ನೆರವಾಗುವ ಅಂಡರ್ ಪಾಸ್‌ಅನ್ನು ಸಹ ನಿರ್ಮಿಸಲು ನಿರ್ಧರಿಸಲಾಗಿದೆ ಎಂದರು. ಈ ವೇಳೆ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ. ಎಸ್.ಷಡಾಕ್ಷರಿ, ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ರೈಲ್ವೆ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.