ಶಿವಮೊಗ್ಗ : ತಾಲೂಕು ಬ್ರಾಹ್ಮಣ ಸೇವಾ ಸಂಘದ ಅಮೃತ ಮಹೋತ್ಸವ ಅಂಗವಾಗಿ ವೈದಿಕ ಭವನದ ಲೋಕಾರ್ಪಣೆ ಕಾರ್ಯಕ್ರಮ ಜೂನ್ ೧೨ರಂದು ನಡೆಯಲಿದೆ.
ಭವನದ ಉದ್ಘಾಟನೆಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ.ರಾಘವೇಂದ್ರ ಆಗಮಿಸಲಿದ್ದಾರೆ. ವಿದ್ವಾನ್ ಡಾ.ವಿ.ಭಾನುಪ್ರಕಾಶ್ ಶರ್ಮ ಧಾರ್ಮಿಕ ನುಡಿಗಳನ್ನಾಡಲಿದ್ದಾರೆ ಹಾಗೂ ಅತಿಥಿಗಳಾಗಿ ಪ್ರಮುಖರು ಉಪಸ್ಥಿತರಿರಲಿದ್ದಾರೆ ಎಂದು ತಾಲೂಕು ಬ್ರಾಹ್ಮಣ ಸೇವಾ ಸಂಘದಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.