ಶಿವಮೊಗ್ಗ : ತಾಲೂಕು ಬ್ರಾಹ್ಮಣ ಸೇವಾ ಸಂಘದ ಅಮೃತ ಮಹೋತ್ಸವದ ಅಂಗವಾಗಿ ಕೋಟೆ ರಸ್ತೆಯಲ್ಲಿನ ಗಾಯಿತ್ರಿ ದೇವಸ್ಥಾನದಲ್ಲಿ ವೈದಿಕ ಭವನ ನಿರ್ಮಿಸಲಾಗಿದ್ದು ಅದರ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಭವನದ ಉದ್ಘಾಟನೆಯನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಿದರು. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಹಾಗೂ ಮತ್ತಿತರ ಪ್ರಮುಖರು ಕೆಎಸ್‌ಈ ಅವರಿಗೆ ಸಾಥ್ ನೀಡಿದರು.
ದೇ ವೇಳೆ ಕಾರ್ಯಕ್ರಮದಲ್ಲಿ ವಿದ್ವಾನ್ ಡಾ.ವಿ.ಭಾನುಪ್ರಕಾಶ್ ಶರ್ಮ ಅವರು ಧಾರ್ಮಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಸಾಕಷ್ಟು ಮಂದಿ ಬ್ರಾಹ್ಮಣ ಸಮಾಜದ ಜನರು ಉಪಸ್ಥಿತರಿದ್ದರು.