ಶಿವಮೊಗ್ಗ : ಸರ್ಜಿ ಫೌಂಡೇಶನ್ ಪ್ರಯೋಜಕತ್ವ ಹಾಗೂ ಸೇಂಟ್ ಜೋಸೆಫ್ ಅಕ್ಷರಧಾಮ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅವರ ನೇತೃತ್ವದಲ್ಲಿ ಸಸಿ ನಡೆವ ಕಾರ್ಯಕ್ರಮ ನಡೆಯಿತು.
ಇದೇ ವೇಳೆ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜನೆ ಮಾಡಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಕೂಡ ನಡೆಯಿತು.