ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಯಿತು.
ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಮಂಗಳೂರು ನಗರ ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನ. ಇಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ ಎಂದು ಮನವಿಮಾಡಿದರು.