ಉಸ್ತುವಾರಿ ಸಚಿವರು ಎಲ್ಲಿ..? ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ 

ಶಿವಮೊಗ್ಗ :  ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ದೊಡ್ಡ ಅವಾಂತರವೇ ಸೃಷ್ಟಿಯಾಗಿದೆ. ತಗ್ಗು ಪ್ರದೇಶದ ಜನರ ಬದುಕು ಮೂರಬಟ್ಟೆಯಾಗಿದೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಮಾತ್ರ ಇತ್ತ ತಿರುಗಿಯೂ ನೋಡಿಲ್ಲ. ನೂರಾರು ಮನೆಗಳಿಗೆ ನೀರು ನುಗ್ಗಿದೆ, ಕೆಲ ರಸ್ತೆಗಳು ನೀರಿನಲ್ಲಿ ಮುಳುಗಿ ಹೋಗಿವೆ. ಸ್ಮಾರ್ಟ್‌ಸಿಟಿ ಕಾಮಗಾರಿಯಿಂದಾಗಿ ದೊಡ್ಡ ಅನಾಹುತವೇ ಸಂಭವಿಸಿದೆ. ಇಷ್ಟಾದ್ರೂ ಜಿಲ್ಲಾ ಉಸ್ತುವಾರಿ ಸಚಿವರು ಇತ್ತ ಸುಳಿಯದೇ ಇರೋದಕ್ಕೆ ಶಿವಮೊಗ್ಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲಾ ಅನಾಹುತದ ಬಳಿಕ ಇದೀಗ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಸಹ ಘೋಷಿಸಲಾಗಿದೆ. ಮಳೆಯಿಂದಾಗಿ ಜನಜೀವನಕ್ಕೆ ತೊಂದರೆಯಾಗಿದ್ದು ತುರ್ತಾಗಿ ಎಲ್ಲ ರೀತಿಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.