ಶಿವಮೊಗ್ಗ : ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಿವಪ್ಪ ನಾಯಕ ವೃತ್ತದಿಂದ ಸೈನ್ಸ್ ಮೈದಾನದವರೆಗೆ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಜಾಗೃತ ಜಾಥಾ ನಡೆಸಿದರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜಾಥಾ ಹಾಗೂ ವೇದಿಕೆ ಕಾರ್ಯಕ್ರಮ ನಡೆಯಿತು.
ಸ್ಥಬ್ಧ ಚಿತ್ರದ ವಾಹನ ಹಾಗೂ ಕರಪತ್ರ ಹಂಚುವ ಮೂಲಕ ಕಾನೂನು ಅರಿವು ಮೂಡಿಲಾಯಿತು. ಜಾಥಾ ಬಳಿಕ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕಾರ್ಮಿಕ ನಿರೀಕ್ಷಕ ಭೀಮೇಶ್.ಪಿ ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರೇಖಾ.ಜಿ.ಎಂ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.